|
ಬೆಂಗಳೂರಿನ ದೊಡ್ಡ ಬಸವಣ್ಣ *ಟಿ.ಎಂ.ಸತೀಶ್
ಈ ದೇವಾಲಯವನ್ನು ಕೆಂಪೇಗೌಡರು 1537ರಲ್ಲಿ ಕಟ್ಟಿಸಿದರು. ದೇವಾಲಯದ ಮುಂದೆ ಸುಂದರವಾದ ದ್ವಜಸ್ತಂಭವಿದೆ. ಈ ಕಲ್ಲು ಕಂಬದಲ್ಲಿ ತಂತಿ ವಾದ್ಯ ನುಡಿಸುತ್ತಿರುವ ಸ್ತ್ರೀ ಮೊದಲಾದ ಉಬ್ಬು ಶಿಲ್ಪಗಳಿವೆ. ದೇವಾಲಯಕ್ಕೆ ಭವ್ಯವಾದ ಗೋಪುರವಿದ್ದು, ಒಳ ಪ್ರಾಕಾರದಲ್ಲಿಯೂ ವಿಶಾಲವಾದ ಗುಡಿ, ಪ್ರಥಕ್ಷಿಣ ಪಥವಿದೆ. ಬಾಗಿಲಲ್ಲಿ ದ್ವಾರಪಾಲಕರ ಶಿಲ್ಪಗಳಿವೆ. ಈ ಗರ್ಭಗೃಹದಲ್ಲಿರುವ ಕಪ್ಪು ಶಿಲೆಯ ಬಸವ ಉದ್ಭವಮೂರ್ತಿಯೆಂದು ಹೇಳುತ್ತಾರೆ. ಪರಶಿವನ ವಾಹನ ಬಸವ ಇಲ್ಲಿ ಬಂದು ಶಿಲೆಯಾದ ಎಂಬ ಪ್ರತೀತಿ ಇದೆ. ಅದಕ್ಕೆ ಪೂರಕವಾಗಿ ಒಂದು ಕಥೆ ಇದೆ.
ಈ ಗೂಳಿ ಅರ್ಥಾತ್ ಬಸವನ ಕಾಟ
ತಾಳಲಾರದೆ ರೈತರು ಒಂದು ದಿನ ರಾತ್ರಿಯಿಡೀ ಕಾದಿದ್ದು ಬಡಿಗೆ ಹಿಡಿದು ಬಸವನ ಬಡಿಯಲು
ಕಾದಿದ್ದರಂತೆ. ನಿರೀಕ್ಷೆಯಂತೆ ಬಸವ ಬಂದ,
ಕಡಲೆಕಾಯಿ
ತಿನ್ನುತ್ತಿದ್ದ. ಇದನ್ನು ನೋಡಿ ಕೋಪಗೊಂಡ ರೈತರು,
ತಾವು ತಂದಿದ್ದ ಬಡಿಗೆ ಹಿಡಿದು ಬಸವನ್ನು ಅಟ್ಟಿಸಿಕೊಂಡು ಹೋದರಂತೆ
ಆಗ ರೈತರ ಹೊಡೆತ ತಪ್ಪಿಸಿಕೊಳ್ಳಲೆಂದು ಓಡಿದ ಬಸವ ಸುಂಕೇನಹಳ್ಳಿಯಿಂದ ಸ್ವಲ್ಪದೂರ
ಓಡಿಬಂದು ಗುಡ್ಡ ಏರಿ ಕಲ್ಲಾದನಂತೆ . ಈ ಸೋಜಿಗವನ್ನು ಕಣ್ಣಾರೆ
ಕಂಡ ರೈತರಿಗೆ ಇದು ಸಾಮಾನ್ಯ ಗೂಳಿಯಲ್ಲ. ಶಿವನ ವಾಹನ ನಂದಿ ಎಂಬ ಸತ್ಯ ತಿಳಿಯಿತಂತೆ.
ಕೈಲಾಸದಿಂದ ಧರೆಗಿಳಿದುಬಂದ ನಂದಿಕೇಶ್ವರನನ್ನೇ ಹೊಡೆದು ಎಂಥ ತಪ್ಪು ಮಾಡಿದೆವೆಂದು
ಮರುಗಿದರಂತೆ. ಅರಿಯದೆ ತಾವು ಮಾಡಿದ ತಪ್ಪು ಮನ್ನಿಸೆಂದು ಪರಿಪರಿಯಾಗಿ ಬೇಡಿದರಂತೆ.
ಅಂದಿನಿಂದ ರೈತರು ತಪ್ಪೊಪ್ಪಿಗೆಯಾಗಿ ಪ್ರತಿವರ್ಷ ಕಡಲೆಕಾಯಿ ಬೆಳೆ ಬಂದ
ಈ ಜಾತ್ರೆಗೆ ಬಸವನ ಭಕ್ತರು ಬಂದು ಬಂದು ಕಡಲೇ ಕಾಯಿ ತಿಂದರೆ, ನಂದಿ ತೃಪ್ತನಾಗುತ್ತಾನೆಂಬುದು ಹಲವು ಹಿರಿಯರ ನಂಬಿಕೆ. ಭಕ್ತರು ತಿಂದು ಎಸೆವ ಸಿಪ್ಪೆಯನ್ನು ರಾತ್ರಿಯ ವೇಳೆ ಕಲ್ಲು ಬಸವ ನಿಜರೂಪ ತಾಳಿ ಆ ಸಿಪ್ಪೆಯನ್ನು ತಿನ್ನುತ್ತಾನೆ ಎಂದು ಇಂದಿಗೂ ಜನ ನಂಬಿದ್ದಾರೆ. ದೊಡ್ಡ ಬಸವಣ್ಣನ ಹಿಂಭಾಗದಲ್ಲಿ ಅದೇ ಕಟ್ಟೆಯ ಮೇಲೆ ಗಣಪತಿಯ ವಿಗ್ರಹ ಪ್ರತಿಷ್ಠಾಪಿಸಲಾಗಿದೆ. ಗಣೇಶನ ಎದುರು ಶಿವ ದೇವಾಲಯವಿದೆ. ಪಕ್ಕದಲ್ಲೇ ಸುಂದರವಾದ ಕಹಳೆ ಬಂಡೆ (ಬ್ಯೂಗಲ್ ರಾಕ್) ಉದ್ಯಾನವಿದೆ. ಈ ಉದ್ಯಾನದಲ್ಲಿ ಧುಮ್ಮಿಕ್ಕುವ ಜಲಧಾರೆ, ಸಂಗೀತ ಕಾರಂಜಿಯೇ ಮೊದಲಾದ ಮನರಂಜನೆಯೂ ಇದೆ. ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-22352901 /22352909 /22352903 Email : kstdc@vsnl.in | |||