|
ಅಪ್ರಮೇಯ ನೆಲೆಸಿಹ ಪವಿತ್ರ ಪುಣ್ಯಕ್ಷೇತ್ರ ಮಳೂರು
ಪುರಂದರ ದಾಸರು ರಚಿಸಿದ ಈ ಗೀತೆ ಬಹು ಜನಪ್ರಿಯ. ಈ ಕೃತಿಯನ್ನು ದಾಸರು ರಚಿಸಿದ್ದು, ಬೆಂಗಳೂರು ಮೈಸೂರು ರಸ್ತೆಯಲ್ಲಿ ಚನ್ನಪಟ್ಟಣ ಬಳಿ ಇರುವ ದೊಡ್ಡ ಮಳೂರಿನ ಕೃಷ್ಣ ದೇವಾಲಯದಲ್ಲಿ, ಪುರಾತನವಾದ ಈ ದೇವಾಲಯದಲ್ಲಿರುವ ಸುಂದರ ಕೃಷ್ಣನ ಮೂರ್ತಿಯನ್ನು ಕಂಡು ಭಾವಪರವಶರಾಗಿ ದಾಸರು ಈ ರಚನೆ ಮಾಡಿದರೆನ್ನುತ್ತದೆ ಇತಿಹಾಸ.
ಕಣ್ವ ನದಿಯ
ದಂಡೆಯ ಮೇಲಿರುವ ಈ ಪುಟ್ಟ ಗ್ರಾಮದ ಹೆಸರು ಜೋಳರ ಕಾಲದ ಹಲವು ದಾಖಲೆಗಳಲ್ಲಿ
ದೊರಕುತ್ತದೆ. ದೊಡ್ಡ ಮಳೂರು, ಮಳ್ಳೂರು, ಮರಳೂರು ಇತ್ಯಾದಿ ಹೆಸರುಗಳಿಂದ
ಕರೆಸಿಕೊಂಡಿತ್ತು.
ಹಿಂದೆ ಇದಕ್ಕೆ
ರಾಜೇಂದ್ರ ಸಿಂಹ ನಗರ ಎಂಬ ಹೆಸರಿತ್ತೆಂದೂ ತಿಳಿದುಬರುತ್ತದೆ. ಸಾರಂಗಧರನಿಗೆ ಇಲ್ಲಿ
ಕೈಗಳು ಮೊಳೆತುದರಿಂದ ಈ ಸ್ಥಳಕ್ಕೆ ಮೊಳತೂರು ಎಂಬ ಹೆಸರು
ಬಂತೆಂದೂ ಕಾಲಾನಂತರದಲ್ಲಿ ಮೊಳತೂರು, ಮಳೂರಾಯಿತೆಂದು ಹೇಳಲಾಗಿದೆ. ಜಗದೇವರಾಯ ಈ
ದೇವಸ್ಥಾನಕ್ಕೆ ಪ್ರಾಕಾರ ಕಟ್ಟಿಸಿದರೆಂದು ತಿಳಿದುಬರುತ್ತದೆ. ಈ ಊರು ಒಂದು ಕಾಲದಲ್ಲಿ
ಇಲ್ಲಿರುವ ಕೃಷ್ಣಮೂರ್ತಿ ಅತ್ಯಂತ ಮನಮೋಹಕವಾಗಿದೆ. 16 ಕೈಗಳನ್ನುಳ್ಳ ಈ ಮೂರ್ತಿ ಶಂಖ, ಚಕ್ರ, ಗದಾ, ಪದ್ಮಾದಿ ಆಯುಧಗಳನ್ನು ಹಿಡಿದಿದ್ದಾನೆ. ಮೂರ್ತಿಯ ಹಿಂಭಾದಲ್ಲಿರುವ ವೃತ್ತಾಕಾರದಲ್ಲಿ ಸೂಕ್ಷ್ಮ ಕೆತ್ತನೆಗಳಿವೆ.
ಮದುವೆಯಾಗಿ
ಬಹುಕಾಲ ಮಕ್ಕಳಾಗದ ದಂಪತಿ, ಈ ದೇವಾಲಯಕ್ಕೆ ಆಗಮಿಸಿ ಬೆಣ್ಣೆ ಕೃಷ್ಣನ ಮಂದಿರದಲ್ಲಿ
ತೊಟ್ಟಿಲು ಕಟ್ಟುವ ಹರಕೆ ಹೊರುತ್ತಾರೆ. ಮಕ್ಕಳಾದ ಬಳಿಕ ಮಗುವಿನೊಂದಿಗೆ ಆಗಮಿಸಿ
ಹರಕೆಯನ್ನೂ ತೀರಿಸುತ್ತಾರೆ ಎನ್ನುತ್ತಾರೆ ಸ್ಥಳೀಯರು.
ಪ್ರಸ್ತುತ ರಾಮನಗರ ಜಿಲ್ಲೆಯಲ್ಲಿರುವ ದೊಡ್ಡ ಮಳೂರಿನಲ್ಲಿ
ಕೃಷ್ಣ
ಜನ್ಮಾಷ್ಠಮಿಯ ದಿನ ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ. | |||